ಅಮಿತ್ ಶಾ ಬೆಂಗಳೂರಿಗೆ ಭೇಟಿ – ನೆಲಮಂಗಲದಲ್ಲಿ ಆಸ್ಪತ್ರೆ ಉದ್ಘಾಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 7 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಅವರು ನೆಲಮಂಗಲಕ್ಕೆ ಭೇಟಿ ನೀಡಿ, ಶ್ರೀ ವಿಶ್ವತೀರ್ಥ ಮಹಾಸ್ವಾಮಿಗಳು ಸ್ಥಾಪಿಸಿರುವ ಹೊಸ ಆಸ್ಪತ್ರೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯದ ಹಲವಾರು ಪ್ರಮುಖ ನಾಯಕರು, ಮಠಾಧಿಪತಿಗಳು ಹಾಗೂ ಬಿಜೆಪಿ ಮುಖಂಡರು ಭಾಗವಹಿಸುವ ಸಾಧ್ಯತೆ ಇದೆ.
ಈ ಭೇಟಿ ರಾಜಕೀಯವಾಗಿಯೂ ಮಹತ್ವದ್ದಾಗಿದೆ, ಏಕೆಂದರೆ ರಾಜ್ಯದಲ್ಲಿ ಮುಂಬರುವ ಚುನಾವಣೆಗೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ನಾಗರಿಕರಲ್ಲಿ ಚರ್ಚೆ ಸೂರುವಾಗಿದೆ . ಬೆಂಗಳೂರಿನಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದ್ದು, ನಗರದಲ್ಲಿ ಪೊಲೀಸ್ ಭದ್ರತೆಯನ್ನು ಕಟ್ಟು ನಿಟ್ಟಾಗಿಸಲಾಗುತ್ತಿದೆ

One thought on “ಅಮಿತ್ ಶಾ ಬೆಂಗಳೂರಿಗೆ ಭೇಟಿ – ನೆಲಮಂಗಲದಲ್ಲಿ ಆಸ್ಪತ್ರೆ ಉದ್ಘಾಟನೆ”