“ಭಾರತೀಯ ರಾಜಕೀಯ ಮತ್ತು ಸಂಗೀತ ಲೋಕದ ಸಂಧಿ: ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದ ಪ್ರಸಾದ್ ಅವರ ಅದ್ಧೂರಿ ವಿವಾಹ!”

Share and Spread the love

ಭಾರತೀಯ ಜನತಾ ಪಕ್ಷದ ಯುವ ಮುಖಂಡ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ಮೂಲದ ಪ್ರಸಿದ್ಧ ಕಾರ್ನಾಟಿಕ್ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾರ್ಚ್ 6, 2025 ರಂದು ಬೆಂಗಳೂರಿನ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಮದುವೆ ಸಮಾರಂಭ ನಡೆಯುತ್ತಿದೆ.

ಮಾರ್ಚ್ 9, 2025 ರಂದು ಬೆಂಗಳೂರು ಅರಮನೆಯ ಗಾಯತ್ರಿ ವಿಹಾರ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಶಿವಶ್ರೀ ಸ್ಕಂದ ಪ್ರಸಾದ್ ಅವರು ಕಾರ್ನಾಟಿಕ್ ಸಂಗೀತ ಮತ್ತು ಭರತನಾಟ್ಯ ಕ್ಷೇತ್ರದಲ್ಲಿ ಪ್ರಸಿದ್ಧರಾಗಿದ್ದಾರೆ. ಅವರು ಮಣಿರತ್ನಂ ನಿರ್ದೇಶಿಸಿದ ‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ಹಾಡಿದ್ದು, ಈ ಮೂಲಕ ಹೆಚ್ಚು ಪ್ರಸಿದ್ಧಿ ಪಡೆದಿದ್ದಾರೆ

ಶಿವಶ್ರೀ ಸ್ಕಂದಪ್ರಸಾದ್ ಅವರು ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿ ಪಡೆದಿದ್ದು, ಚೆನ್ನೈ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಎಮ್.ಎ ಪದವಿಯನ್ನು ಪಡೆದಿದ್ದಾರೆ.

ಮದುವೆಯ ಫೋಟೋ ಗ್ಯಾಲರಿ

ಈ ಮದುವೆ ಸಮಾರಂಭದಲ್ಲಿ ರಾಜಕೀಯ, ಸಂಗೀತ ಮತ್ತು ಕಲಾ ಕ್ಷೇತ್ರದ ಗಣ್ಯರು ಭಾಗವಹಿಸಿ ನವಜೋಡಿಗೆ ಶುಭಾಶಯ ಕೋರಿದ್ದಾರೆ. ಮಾರ್ಚ್ 9 ರಂದು ನಡೆಯಲಿರುವ ಆರತಕ್ಷತೆ ಕಾರ್ಯಕ್ರಮದಲ್ಲಿ ಮತ್ತಷ್ಟು ಗಣ್ಯರ ಉಪಸ್ಥಿತಿ ನಿರೀಕ್ಷಿಸಲಾಗಿದೆ.


Share and Spread the love

Leave a Reply

Your email address will not be published. Required fields are marked *