2025-26 ಬಜೆಟ್ ಪ್ರಕಾರ ಆಶಾ ಕಾರ್ಯಕರ್ತೆಯರಿಗೆ ಮತ್ತು ಆರೋಗ್ಯ ಸಿಬ್ಬಂದಿಗೆ ಬಂಪರ್ ಸುದ್ದಿ: ರಾಜ್ಯ ಸರ್ಕಾರದಿಂದ ಗೌರವಧನ ಹೆಚ್ಚಳ! ಇಲ್ಲಿದೆ ಅದರ ಕಂಪ್ಲೀಟ್ ಡೀಟೇಲ್ಸ್ ನೋಡಿ.
ಬೆಂಗಳೂರು, ಮೇ 17: ರಾಜ್ಯದ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗೆ ರಾಜ್ಯ ಸರ್ಕಾರದಿಂದ ಖುಷಿಯ ಸುದ್ದಿ ಬಂದಿದೆ. 2025-26ನೇ ಸಾಲಿನ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಂತೆ, ಆರೋಗ್ಯ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳಿಗೆ ತಿಂಗಳಿಗೆ ತಂಡ ಆಧಾರಿತ ಪ್ರೋತ್ಸಾಹಧನ (Team-Based Incentive) ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಆದೇಶದ ಪ್ರಕಾರ,
- ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ರೂ.1500 ಪ್ರೋತ್ಸಾಹಧನ ನೀಡಲಾಗುವುದು.
- ಆರೋಗ್ಯ ನಿರೀಕ್ಷಣಾಧಿಕಾರಿಗಳಿಗೆ ರೂ.1500 ಪ್ರೋತ್ಸಾಹಧನ ನೀಡಲಾಗುವುದು.
- ಆಶಾ ಕಾರ್ಯಕರ್ತೆಯರಿಗೆ ರೂ.1000 ಪ್ರೋತ್ಸಾಹಧನ ನೀಡಲಾಗುವುದು.
ಈ ಯೋಜನೆಗೆ ಅನುಸರಿಸಿ ರಾಜ್ಯ ಸರ್ಕಾರದ ಅನುದಾನದಲ್ಲಿ ರೂ.1800.48 ಲಕ್ಷ ರೂಪಾಯಿಗಳ ವೆಚ್ಚವನ್ನು ಭರಿಸಲಾಗುತ್ತಿದೆ.
ಈ ಆದೇಶವು 2025ರ ಆಯುಷ್ಮಾನ್ ಆರೋಗ್ಯ ಮಂದಿರ ಯೋಜನೆದಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗ್ರಾಮೀಣ ಹಾಗೂ ನಗರ ಪ್ರದೇಶದ ಆಶಾ ಕಾರ್ಯಕರ್ತೆಯರಿಗೂ ಅನ್ವಯವಾಗುತ್ತದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ರಾಜ್ಯದಲ್ಲಿ ಒಟ್ಟು 42,524 ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 41,000 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಸೇವೆ ಸಲ್ಲಿಸುತ್ತಿದ್ದಾರೆ. ಈ ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಪ್ರತಿ 1000 ಜನರಿಗೆ ಮತ್ತು ನಗರ ಭಾಗದಲ್ಲಿ ಪ್ರತಿ 2500 ಜನರಿಗೆ ಒಬ್ಬ ಆಶಾ ಕಾರ್ಯಕರ್ತೆ ಸೇವೆ ನೀಡುತ್ತಿದ್ದಾರೆ.

ಅನುದಾನ ಹಾಗೂ ಅನುಮೋದನೆ:
ಈ ಯೋಜನೆಗಾಗಿ ಸರಕಾರವು ₹1800.48 ಲಕ್ಷ ರೂ. ಅನುದಾನವನ್ನು ಲೆಕ್ಕ ಶೀರ್ಷಿಕೆ 2211-00-103-0-11 ಉಪಲೆಕ್ಕ 324 ಅಡಿಯಲ್ಲಿ ಮೀಸಲಿರಿಸಿದೆ. ಈ ಆದೇಶವು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ 90 23-5/2025 ಹಾಗೂ ಸಚಿವ ಸಂಪುಟದ ಟಿಪ್ಪಣಿ ಸಂಖ್ಯೆ 2.340/2025ರ ಆಧಾರದಲ್ಲಿ ಹೊರಡಿಸಲಾಗಿದೆ.
ಈ ಹೊಸ ಆದೇಶದಿಂದ ಆಶಾ ಕಾರ್ಯಕರ್ತೆಯರ ತೊಂದರೆಗಿಂತ ಹೆಚ್ಚು ಸೇವೆಯನ್ನು ಮಾನ್ಯತೆ ನೀಡಲಾಗಿದೆ. ಸರಕಾರದ ಈ ಕ್ರಮವು ಅವರ ನಿಸ್ವಾರ್ಥ ಸೇವೆಯನ್ನು ಗೌರವಿಸುವುದು ಮಾತ್ರವಲ್ಲದೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲವರ್ಧನೆಯಲ್ಲಿಯೂ ಪ್ರಮುಖ ಹಂತವಾಗಿದೆ.
ಇದನ್ನೂ ಓದಿ: Karnataka Mathrushree Yojana 2025: ಮಾತೃಶ್ರೀ ಯೋಜನೆ 2025: ಗರ್ಭಿಣಿಯರಿಗೆ ₹6,000 ನೆರವು – ಇಂದೇ ಅರ್ಜಿ ಸಲ್ಲಿಸಿ!


ನೀರಿಕ್ಷಿತ ಫಲಿತಾಂಶಗಳು:
- ಆಶಾ ಕಾರ್ಯಕರ್ತೆಯರ ದೈನಂದಿನ ಸೇವೆಗಳಿಗೆ ಗೌರವ ಮತ್ತು ಪ್ರೋತ್ಸಾಹ ಹೆಚ್ಚಳವಾಗಲಿದೆ.
- ಆರೋಗ್ಯ ಸೇವೆಗಳ ಗುಣಮಟ್ಟ ಹೆಚ್ಚಳವಾಗಲಿದೆ.
- ಸಮುದಾಯದ ಆರೋಗ್ಯದ ಬಗ್ಗೆ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲಾಗುತ್ತದೆ.
ಆದೇಶವು ಆರ್ಥಿಕ ಇಲಾಖೆಯ ಅನುಮೋದನೆ ಮತ್ತು ಸಚಿವ ಸಂಪುಟದ ಒಪ್ಪಿಗೆ ಪಡೆದು ಅಧಿಕೃತವಾಗಿ ಪ್ರಕಟವಾಗಿದೆ. ಇದು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಎಲ್ಲಾ ಆಶಾ ಸಿಬ್ಬಂದಿಗೆ ಸಮಾನ ಪ್ರೋತ್ಸಾಹಧನ ನೀಡುವ ಮಹತ್ವದ ಹೆಜ್ಜೆಯಾಗಿದೆ.
👉Read More Jobs News/ ಇನ್ನಷ್ಟು ಜಾಬ್ಸ್ ಸುದ್ದಿ ಓದಿ
🔗(E-Swathu) ಇ-ಸ್ವತ್ತು ಕರ್ನಾಟಕ: ಗ್ರಾಮೀಣ ಕೃಷಿಯೇತರ ಆಸ್ತಿಗೆ ಕಡ್ಡಾಯವಾದ ಡಿಜಿಟಲ್ ಪ್ರಮಾಣಪತ್ರ ಪಡೆಯುವುದು ಹೇಗೆ?
ಇಂತಹ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ/ಸರ್ಕಾರಿ ಉದ್ಯೋಗ ನೋಟಿಫಿಕೇಶನ್‌ಗಳನ್ನು ತಕ್ಷಣವೇ ಪಡೆಯಲು!WhatsApp & Telegram ಗ್ರೂಪ್‌ಗಳಿಗೆ ಸೇರಿ. Click to Join Below Button 👇