ISRO Scientist Engineer Recruitment 2025: ಇಸ್ರೋದಲ್ಲಿ 39 ಸೈಂಟಿಸ್ಟ್/ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ಸಿವಿಲ್, ಎಲೆಕ್ಟ್ರಿಕಲ್ ಸೇರಿ ವಿವಿಧ ವಿಭಾಗಗಳಲ್ಲಿ ಅವಕಾಶ. ಜುಲೈ 14 ಕೊನೆ ದಿನ. ನಿಮ್ಮ ಬಾಹ್ಯಾಕಾಶ ಕನಸಿಗೆ ಇದೇ ಶುಭ ಸಮಯ! ಈಗಲೇ ಅರ್ಜಿ ಸಲ್ಲಿಸಲು ಕೆಳಗಿನ ಮಾಹಿತಿಯನ್ನು ನೋಡಿ.
ಬೆಂಗಳೂರು, ಜುಲೈ 05, 2025: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ – ISRO) ಖಾಲಿ ಇರುವ ಸೈಂಟಿಸ್ಟ್/ಎಂಜಿನಿಯರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 39 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 14, 2025 ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ISRO Scientist Engineer Recruitment 2025: ಖಾಲಿ ಇರುವ ಹುದ್ದೆಗಳ ವಿಭಾಗಗಳು:
ಇಸ್ರೋದಲ್ಲಿ ಸಿವಿಲ್, ಎಲೆಕ್ಟ್ರಿಕಲ್, ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್, ಹಾಗೂ ಆರ್ಕಿಟೆಕ್ಚರ್ ವಿಭಾಗಗಳಲ್ಲಿ ಸೈಂಟಿಸ್ಟ್/ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ISRO Scientist Engineer Recruitment 2025: ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಸೇರದಂತೆ ಆಯಾ ವಿಭಾಗಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಬಿ.ಇ. (B.E.) ಅಥವಾ ಬಿ.ಟೆಕ್ (B.Tech) ಪದವಿ ಪೂರ್ಣಗೊಳಿಸಿರಬೇಕು. ನಿಗದಿತ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.60 ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವುದು ಕಡ್ಡಾಯ.
ISRO Scientist Engineer Recruitment 2025: ವಯೋಮಿತಿ:
ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 33 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವವರು 750 ರೂ. ಶುಲ್ಕ ಪಾವತಿಸಬೇಕು. ಆದರೆ, ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ), ವಿಶೇಷಚೇತನ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಪಾವತಿಸಿದ 750 ರೂ. ಶುಲ್ಕದಲ್ಲಿ 500 ರೂ. ಅನ್ನು ಮರುಪಾವತಿ (ರೀಫಂಡ್) ಮಾಡಲಾಗುತ್ತದೆ. ಈ ಮರುಪಾವತಿ ಸೌಲಭ್ಯವು ಅರ್ಜಿ ಸಲ್ಲಿಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.
ಆಯ್ಕೆ ವಿಧಾನ ಮತ್ತು ಪರೀಕ್ಷಾ ಕೇಂದ್ರಗಳು:
ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಬೆಂಗಳೂರು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 14, 2025
ಹೆಚ್ಚಿನ ಮಾಹಿತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಕೆಗಾಗಿ ಇಸ್ರೋದ ಅಧಿಕೃತ ವೆಬ್ಸೈಟ್ https://isro.gov.in ಗೆ ಭೇಟಿ ನೀಡಬಹುದು.
🔗Important Links /Dates:
ISRO Scientist Engineer Recruitment 2025 official Website/ಇಸ್ರೋ ವಿಜ್ಞಾನಿ ನೇಮಕಾತಿ ಅಧಿಕೃತ ವೆಬ್ಸೈಟ್ | Official Website: Click Here Apply On-line Here: Click Here |
---|---|
ISRO Scientist Engineer Recruitment 2025: Detailed Advertisement/ ಇಸ್ರೋ ವಿಜ್ಞಾನಿ ನೇಮಕಾತಿಗಳ ಅಧಿಸೂಚನೆ | Click Here for Notification |
Last Date | 14/07/2025 |
👉Read More Jobs News/ ಇನ್ನಷ್ಟು ಜಾಬ್ಸ್ ಸುದ್ದಿ ಓದಿ
🔗IBPS PO SO Recruitment 2025:ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ: IBPS 6215 ಹುದ್ದೆಗಳಿಗೆ ಅರ್ಜಿ!
🔗AFCAT 2025: ಭಾರತೀಯ ವಾಯುಪಡೆಯ ಫ್ಲೈಯಿಂಗ್ ಮತ್ತು ಗ್ರೌಂಡ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಇಂತಹ ಸರ್ಕಾರಿ ಉದ್ಯೋಗ ನೋಟಿಫಿಕೇಶನ್ಗಳನ್ನು ತಕ್ಷಣವೇ ಪಡೆಯಲು!WhatsApp & Telegram ಗ್ರೂಪ್ಗಳಿಗೆ ಸೇರಿ. Click to Join Below Button👇