Karnataka Minority Free Education KSOU-2025-26: ಕರ್ನಾಟಕದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 2025-26ಕ್ಕೆ KSOU ಮೂಲಕ ಉಚಿತ ಪದವಿ, ಸ್ನಾತಕೋತ್ತರ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ. ವಿವರಗಳು, ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ ತಿಳಿಯಿರಿ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: 2025-26ನೇ ಸಾಲಿಗೆ KSOU ಮೂಲಕ ಉಚಿತ ಪದವಿ, ಸ್ನಾತಕೋತ್ತರ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ!
ಬೆಂಗಳೂರು, ಜುಲೈ 01, 2025: ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದು ಬಂದಿದೆ. ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ವಿದ್ಯಾರ್ಥಿಗಳಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (KSOU) ಮೂಲಕ ದೂರ ಶಿಕ್ಷಣ ಮಾದರಿಯಲ್ಲಿ ಉಚಿತವಾಗಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. 2025-26ನೇ ಶೈಕ್ಷಣಿಕ ಸಾಲಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Who is eligible for Karnataka Minority Free Education KSOU-2025-26: ಯಾರು ಅರ್ಹರು?
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯಬಹುದು. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಮತ್ತು ಅವರ ಕುಟುಂಬದ ವಾರ್ಷಿಕ ಆದಾಯ (ಎಲ್ಲಾ ಮೂಲಗಳಿಂದ) 8.00 ಲಕ್ಷ ರೂ.ಗಳನ್ನು ಮೀರಬಾರದು.
ಯಾವ ಕೋರ್ಸ್‌ಗಳು ಲಭ್ಯ? Karnataka Minority Free Education KSOU-2025-26: Available Courses:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಯು.ಜಿ.ಸಿ. ಅನುಮೋದನೆಯೊಂದಿಗೆ ನಡೆಸುವ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಾತಿ ಲಭ್ಯವಿದೆ.
- ಸ್ನಾತಕ ಪೂರ್ವ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕಾರ್ಯಕ್ರಮಗಳು: ಪಿ.ಯು.ಸಿ. ಅಥವ 10+2 ತರಗತಿಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳನ್ನು ವಿವಿಯ ನಿಯಮಾನುಸಾರ ಪರಿಗಣಿಸಲಾಗುವುದು.
- ಸ್ನಾತಕೋತ್ತರ ಪದವಿ ಮತ್ತು ಸರ್ಟಿಫಿಕೇಟ್ ಕಾರ್ಯಕ್ರಮಗಳು: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ.
- ಪದವಿ ಕೋರ್ಸ್‌ಗಳು: ಪದವಿ ಪೂರ್ವ ಶಿಕ್ಷಣವನ್ನು ಕಡ್ಡಾಯವಾಗಿ ಪಡೆದಿರುವ ವಿದ್ಯಾರ್ಥಿಗಳಿಗೆ ಮಾತ್ರ ಆಯ್ಕೆ.

ಉಚಿತ ಶಿಕ್ಷಣದ ಪ್ರಯೋಜನ: Karnataka Minority Free Education KSOU-2025-26 Benifits:
ಈ ಯೋಜನೆಯಡಿ, ಅಲ್ಪಸಂಖ್ಯಾತರ ನಿರ್ದೇಶನಾಲಯವು ಆಯಾ ಸಾಲಿನ ಪ್ರವೇಶಾತಿ ಹಾಗೂ ಪರೀಕ್ಷಾ ಶುಲ್ಕಗಳನ್ನು (ವಾರ್ಷಿಕ/ಸೆಮಿಸ್ಟರ್‌ಗಳು) ಸಂಪೂರ್ಣವಾಗಿ ಉಚಿತವಾಗಿ ಪಾವತಿಸಲಿದೆ.
ಅರ್ಜಿ ಸಲ್ಲಿಸುವುದು ಹೇಗೆ? How to apply Karnataka Minority Free Education KSOU-2025-26:
ಅರ್ಹ ವಿದ್ಯಾರ್ಥಿಗಳು 2025ರ ಜುಲೈ 01 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 25, 2025.
ಅರ್ಜಿ ಸಲ್ಲಿಸಲು ಎರಡು ಪ್ರಮುಖ ಜಾಲತಾಣಗಳು ಲಭ್ಯ:
- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಲ್ಪಸಂಖ್ಯಾತರ ಪೋರ್ಟಲ್: https://minority.ksouportal.com/
- ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್: https://dom.karnataka.gov.in
ವಿದ್ಯಾರ್ಥಿಗಳು ನೇರವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕೇಂದ್ರ ಕಚೇರಿ, ಮೈಸೂರು ಅಥವಾ ತಮ್ಮ ಜಿಲ್ಲೆಯ ಹತ್ತಿರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಗಳಿಗೆ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹಜ್ ಕಚೇರಿ, ಬೆಂಗಳೂರಿನ ಪ್ರಾದೇಶಿಕ ಕೇಂದ್ರವನ್ನೂ ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನಕ್ಕಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://dom.karnataka.gov.in ಕ್ಕೆ ಭೇಟಿ ನೀಡಬಹುದು.
ಸಹಾಯವಾಣಿ ಸಂಖ್ಯೆಗಳು:
ಸಹಾಯಕ್ಕಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು:
9900667916 / 827779990 / 9945366062 / 9113512565 / 9611418726 / 9900509959 / 9035395137.
ಹೆಚ್ಚುವರಿ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಹತ್ತಿರದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸಬಹುದು.
ಈ ಯೋಜನೆಯು ಕರ್ನಾಟಕ ಸರ್ಕಾರದ ಆದೇಶಗಳು, KSOU ಸುತ್ತೋಲೆಗಳು ಮತ್ತು ಅಲ್ಪಸಂಖ್ಯಾತರ ನಿರ್ದೇಶನಾಲಯದ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ನಿರ್ದೇಶನಾಲಯ ತಿಳಿಸಿದೆ.
👉Read More Education News/ ಇನ್ನಷ್ಟು ಶಿಕ್ಷಣ ಸುದ್ದಿ ಓದಿ
🔗SDF Vidyadhan Scholarship 2025 : ಪ್ರತಿಭಾವಂತ ಎಸ್.ಎಸ್.ಎಲ್.ಸಿ ಉತ್ತೀರ್ಣ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ!
🔗Vidyasiri Scholarship 2025: ವಿದ್ಯಾಸಿರಿ – ಊಟ ಮತ್ತು ವಸತಿ ಸಹಾಯ ಯೋಜನೆ (2025) ಸಂಪೂರ್ಣ ಮಾಹಿತಿ
ಇಂತಹ ಸರ್ಕಾರಿ ಉದ್ಯೋಗ/ ಶಿಕ್ಷಣ ಮಾಹಿತಿ ನೋಟಿಫಿಕೇಶನ್‌ಗಳನ್ನು ತಕ್ಷಣವೇ ಪಡೆಯಲು!WhatsApp & Telegram ಗ್ರೂಪ್‌ಗಳಿಗೆ ಸೇರಿ. Click to Join Below Button