ಮೇ 16ರಂದು ಕೊಡಗು ಜಿಲ್ಲೆಯಲ್ಲಿ ಉದ್ಯೋಗ ಮೇಳ ಹಾಗೂ ಅಂಗನವಾಡಿ ಹುದ್ದೆಗಳ ನೇಮಕಾತಿ!

ಮೇ 16ರಂದು ಕೊಡಗು ಜಿಲ್ಲೆಯಲ್ಲಿ ಉದ್ಯೋಗ ಮೇಳ ಹಾಗೂ ಅಂಗನವಾಡಿ ಹುದ್ದೆಗಳ ನೇಮಕಾತಿ!
Share and Spread the love

ಮೇ 16ರಂದು ಕೊಡಗು ಜಿಲ್ಲೆಯಲ್ಲಿ ಉದ್ಯೋಗ ಮೇಳ ಹಾಗೂ ಅಂಗನವಾಡಿ ಹುದ್ದೆಗಳ ನೇಮಕಾತಿ! ಇಲ್ಲಿದೆ ಅದರ ಕಂಪ್ಲೀಟ್ ಡೀಟೇಲ್ಸ್ ನೋಡಿ.

ಮಡಿಕೇರಿ, ಮೇ 15: ಕೊಡಗು ಜಿಲ್ಲೆಯ ಯುವ ಉದ್ಯೋಗ ಹುಡುಕುವವರಿಗೆ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವೊಂದು ಸಿಕ್ಕಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ ಇವರ ಸಹಯೋಗದಲ್ಲಿ ಎರಡು ಪ್ರತ್ಯೇಕ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ. ಒಂದೆಡೆ ಮಿನಿ ಉದ್ಯೋಗ ಮೇಳ ನಡೆಯಲಿದ್ದು, ಇನ್ನೊಂದು ಕಡೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿ ನಡೆಯಲಿದೆ.

Follow Us Section

ಮಿನಿ ಉದ್ಯೋಗ ಮೇಳ ಮೇ 16ರಂದು

ಕೊಡಗು ಜಿಲ್ಲೆಯ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 16ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಸ್ಥಳೀಯ ಯುವತಿಯರು ಮತ್ತು ಯುವಕರು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿರುವ ಈ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಈ ಕಂಪನಿಗಳು ನೇರ ಸಂದರ್ಶನದ ಮೂಲಕ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಸಲಿವೆ.

ಈ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಪೆಂಟಾಟೆಕ್, ಇಬ್ಬನಿ ರೆಸಾರ್ಟ್, ಕ್ಲಬ್ ಮಹೀಂದ್ರ ರೆಸಾರ್ಟ್ ಮಡಿಕೇರಿ ಅವರು ಭಾಗವಹಿಸುತ್ತಿದ್ದು, ತಮ್ಮ ಕಂಪನಿಗಳಲ್ಲಿರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ.

ಅರ್ಜಿ ಸಲ್ಲಿಸಲು ಆಗಮಿಸುವವರು ತಮ್ಮ ವಿದ್ಯಾರ್ಹತಾ ಪ್ರಮಾಣ ಪತ್ರಗಳು, ಅನುಭವ ಪ್ರಮಾಣ ಪತ್ರಗಳು ಹಾಗೂ ಸ್ವ-ವಿವರಗಳ ಪ್ರತಿಗಳನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8296020826 ನ್ನು ಸಂಪರ್ಕಿಸಬಹುದಾಗಿದೆ.

ಅಂಗನವಾಡಿ ಹುದ್ದೆಗಳ ನೇಮಕ

ಕೊಡಗು ಜಿಲ್ಲೆಯ ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 45 ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ 12 ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 32 ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮಹಿಳಾ ಅಭ್ಯರ್ಥಿಗಳು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಜೂನ್ 6ರ ಸಂಜೆ 5.30 ಗಂಟೆಯೊಳಗೆ ಅರ್ಜಿಯನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ https://karnemakaone.kar.nic.in/abcd/ ಗೆ ಭೇಟಿ ನೀಡಬೇಕು.

ವಿದ್ಯಾರ್ಹತೆಗಳು:

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ಪಾಸಾಗಿದ್ದು, ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು.
  • ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿ ಪೂರೈಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಜೂನ್ 9ಕ್ಕೆ ಕನಿಷ್ಠ 19 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ದೊರೆಯಲಿದೆ. ಅರ್ಜಿ ಸಲ್ಲಿಸುವ ಮೊದಲು ನೇಮಕಾತಿಯ ಎಲ್ಲಾ ಮಾರ್ಗಸೂಚಿ ಮತ್ತು ನಿಯಮಗಳನ್ನು ಓದಿ, ಅಗತ್ಯ ದಾಖಲೆಗಳನ್ನು ಡಿಜಿಲಾಕರ್ ಮೂಲಕ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು. ನಂತರ ಯಾವುದೇ ದಾಖಲಾತಿಗಳನ್ನು ಮುಂಗಡವಾಗಿ ಅಥವಾ ದಸ್ತಾವೇಜು ರೂಪದಲ್ಲಿ ಸಲ್ಲಿಸಿದರೆ ಪರಿಗಣನೆಗೆ ಬರುವುದಿಲ್ಲ.

ಹೆಚ್ಚಿನ ಮಾಹಿತಿಗೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು.

👉Read More Jobs News/ ಇನ್ನಷ್ಟು ಜಾಬ್ಸ್ ಸುದ್ದಿ ಓದಿ

🔗RITES Field Engineer Recruitment 2025: ಬೆಂಗಳೂರು ಕಚೇರಿಯಲ್ಲಿ 14 ಹುದ್ದೆಗಳು – ಈಗಲೇ ಅರ್ಜಿ ಸಲ್ಲಿಸಿ!

🔗BARC JRF Recruitment 2025: 105 ಫೆಲೋಶಿಪ್ ಹುದ್ದೆಗಳು-ಮೇ 19 ಕೊನೆಯ ದಿನಾಂಕ

🔗CISF Recruitment 2025: ಹಾಕಿ ಕ್ರೀಡಾಪಟುಗಳಿಗೆ ಉದ್ಯೋಗ ಅವಕಾಶ – ಸಂಪೂರ್ಣ ಮಾಹಿತಿ ಇಲ್ಲಿದೆ

🔗ISRO Scientist/Engineer Jobs: 63 ವಿಜ್ಞಾನಿ ಮತ್ತು ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಇಂತಹ ಸರ್ಕಾರಿ ಉದ್ಯೋಗ ನೋಟಿಫಿಕೇಶನ್‌ಗಳನ್ನು ತಕ್ಷಣವೇ ಪಡೆಯಲು!WhatsApp & Telegram ಗ್ರೂಪ್‌ಗಳಿಗೆ ಸೇರಿ. Click to Join Below Button👇

Follow Us Section
Share and Spread the love

Leave a Reply

Your email address will not be published. Required fields are marked *

ಮುಖಪುಟ ಉದ್ಯೋಗ ಶಿಕ್ಷಣ English Blogs