2025-26ನೇ ಸಾಲಿಗೆ ಅಲ್ಪಸಂಖ್ಯಾತರ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಇದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು **ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್‍ಇ, ಆಂಗ್ಲ ಮಾಧ್ಯಮ)**ಗಳ 6ನೇ ತರಗತಿಗೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ( https://sevasindhuservices.karnataka.gov.in ) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 10.
ಸೀಟು ವಿಂಗಡಣೆ:
- ಅಲ್ಪಸಂಖ್ಯಾತ ಸಮುದಾಯದ (ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ, ಪಾರ್ಸಿ) ವಿದ್ಯಾರ್ಥಿಗಳಿಗೆ – 75%
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ – 25%
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸೌಲಭ್ಯಗಳು:
- ಉಚಿತ ವಸತಿ ಹಾಗೂ ಊಟ
- ವರ್ಷಕ್ಕೆ ಉಚಿತ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ
- ಪಠ್ಯಪುಸ್ತಕಗಳು ಹಾಗೂ ಲೇಖನ ಸಾಮಗ್ರಿ ವಿತರಣಾ
- ಪ್ರತಿ ಬಾಲಕ ವಿದ್ಯಾರ್ಥಿಗೆ ಎರಡು ತಿಂಗಳಿಗೊಮ್ಮೆ ಕ್ಷೌರದ ವ್ಯವಸ್ಥೆ
- ಟೂತ್‍ಪೇಸ್ಟ್, ಸೋಪ್, ಬ್ರಷ್, ಎಣ್ಣೆ ಒಳಗೊಂಡ ಸೋಪ್ ಕಿಟ್ ವಿತರಣೆ
- ವೈದ್ಯಕೀಯ ಸೌಲಭ್ಯ, ಹಾಸಿಗೆ, ಹೊದಿಕೆ, ಟ್ರಂಕ್, ಮಂಚ ಒದಗಿಕೆ
- ಪ್ರಯೋಗಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಗ್ರಿ ಹಾಗೂ ಗ್ರಂಥಾಲಯ ಸೌಲಭ್ಯ
Read More Jobs News/ ಇನ್ನಷ್ಟು ಜಾಬ್ಸ್ ಸುದ್ದಿ ಓದಿ:
South East Central Railway (SECR) ದಕ್ಷಿಣ ಪೂರ್ವ ಮಧ್ಯ ರೈಲ್ವೆನಲ್ಲಿ ನೇಮಕಾತಿ: 1003 ಅಪ್ರೆಂಟಿಸ್ ಹುದ್ದೆಗಳ ಭರ್ತಿ

PDF file click Here: Click
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:
📌 ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ (ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ) – 7676473767
📌 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಅರ್ಜಿ ಗ್ರಾಮ, ಪೆರಂಬಾಡಿ, ವಿರಾಜಪೇಟೆ) – 8105409405
📌 ತಾಲ್ಲೂಕು ಮಾಹಿತಿ ಕೇಂದ್ರ, ಸೋಮವಾರಪೇಟೆ – 8548068519
📌 ತಾಲ್ಲೂಕು ಮಾಹಿತಿ ಕೇಂದ್ರ, ವಿರಾಜಪೇಟೆ – 9900731037
ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀ.ಆರ್.ಕೃಷ್ಣಮೂರ್ತಿ ಅವರು ಕೋರಿದ್ದಾರೆ.
ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ತಮ್ಮ ಅರ್ಹತೆ ಮತ್ತು ಅಗತ್ಯಗಳನ್ನು ಪರಿಶೀಲಿಸಿ, ನಂತರವೇ ಅರ್ಜಿ ಸಲ್ಲಿಸಲು ಮುಂದಾಗಬೇಕು.ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮಾಡಿ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ!