ಚಾಲಕರ ನಿರ್ಲಕ್ಷ್ಯದಿಂದಾದ ಅಪಘಾತಗಳಿಗೆ ವಿಮಾ ಕಂಪನಿ ಪರಿಹಾರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು. ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿಹಿಡಿದ ಸರ್ವೋಚ್ಚ ನ್ಯಾಯಾಲಯ. ಇಲ್ಲಿದೆ ಅದರ ಕಂಪ್ಲೀಟ್ ಡೀಟೇಲ್ಸ್ ನೋಡಿ.
ನವದೆಹಲಿ, ಜುಲೈ 05, 2025: ಅತಿ ವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸಿ ಸವಾರ ಮೃತಪಟ್ಟರೆ, ಅವರ ಕುಟುಂಬಕ್ಕೆ ಮೋಟಾರು ವಾಹನ ಕಾಯ್ದೆಯಡಿ ವಿಮಾ ಕಂಪನಿಯು ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಚಾಲಕರ ತಪ್ಪಿನಿಂದ ಸಂಭವಿಸಿದ ಅಪಘಾತಗಳಿಗೆ ವಿಮಾ ಪರಿಹಾರ ಅನ್ವಯವಾಗುವುದಿಲ್ಲ ಎಂಬುದನ್ನು ಇದು ಪುನರುಚ್ಚರಿಸಿದೆ.
ಪರಿಹಾರಕ್ಕೆ ಸುಪ್ರೀಂ ಕೋರ್ಟ್ ನಿರಾಕರಣೆ:
ಅತಿವೇಗದಲ್ಲಿ ಕಾರು ಚಲಾಯಿಸಿ ಮೃತಪಟ್ಟ ವ್ಯಕ್ತಿಯೊಬ್ಬರ ಪತ್ನಿ, ಮಗ ಮತ್ತು ಪೋಷಕರು ಕೋರಿದ್ದ ₹80 ಲಕ್ಷ ಪರಿಹಾರ ನೀಡಲು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಆರ್. ಮಹಾದೇವನ್ ಅವರ ಪೀಠ ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶದ ವಿರುದ್ಧ ಮೃತರ ಕಾನೂನುಬದ್ಧ ಉತ್ತರಾಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್:
ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ 2024ರ ನವೆಂಬರ್‌ನಲ್ಲಿ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. “ಹೈಕೋರ್ಟ್ ನೀಡಿದ ತೀರ್ಪಿನಲ್ಲಿ ನಾವು ಹಸ್ತಕ್ಷೇಪ ಮಾಡಲು ಒಲವು ಹೊಂದಿಲ್ಲ. ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಪೀಠವು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಅಪಘಾತದ ವಿವರಗಳು:
ಘಟನೆಯು 2014ರ ಜೂನ್‌ನಲ್ಲಿ ನಡೆದಿತ್ತು. ಎನ್.ಎಸ್.ರವೀಶ ಎಂಬುವರು ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಮೃತಪಟ್ಟಿದ್ದರು. ಅಪಘಾತ ಸಂಭವಿಸಿದಾಗ ರವೀಶ ಅವರ ತಂದೆ, ಸಹೋದರಿ ಹಾಗೂ ಅವರ ಮಕ್ಕಳು ಸಹ ಕಾರಿನಲ್ಲಿ ಇದ್ದರು.
ಪ್ರಕರಣದ ಎಫ್‌ಐಆರ್‌ನಲ್ಲಿ, “ರವೀಶ ಕಾರನ್ನು ನಿರ್ಲಕ್ಷ್ಯದಿಂದ ಚಲಾಯಿಸಿದ್ದಾರೆ. ಅವರು ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ರಸ್ತೆಗೆ ಉರುಳಿಬಿದ್ದಿತ್ತು. ಇದರಿಂದ ತೀವ್ರ ಗಾಯಗೊಂಡು ಅವರು ಮೃತಪಟ್ಟಿದ್ದರು” ಎಂದು ಉಲ್ಲೇಖಿಸಲಾಗಿತ್ತು.
ಮೃತರ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿಯೇ ಅಪಘಾತ ಸಂಭವಿಸಿದೆ. ಆದ್ದರಿಂದ, ಅವರ ಕುಟುಂಬದವರಿಗೆ ಮೋಟಾರು ವಾಹನ ಕಾಯ್ದೆಯಡಿ ವಿಮಾ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನೇ ಸುಪ್ರೀಂ ಕೋರ್ಟ್ ಕೂಡ ಅಂತಿಮಗೊಳಿಸಿದೆ.
👉Read More Govt Schemes News/ ಇನ್ನಷ್ಟು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಸುದ್ದಿ ಓದಿ
🔗Gruha Jyothi Yojana: ಮನೆ ಬದಲಿಸಿದರೆ ಗೃಹಜ್ಯೋತಿ ಯೋಜನೆಯ ಲಾಭ ಹೇಗೆ ಪಡೆಯುವುದು? ಇಲ್ಲಿದೆ ಸಂಪೂರ್ಣ ಮಾಹಿತಿ!
🔗(E-Swathu) ಇ-ಸ್ವತ್ತು ಕರ್ನಾಟಕ: ಗ್ರಾಮೀಣ ಕೃಷಿಯೇತರ ಆಸ್ತಿಗೆ ಕಡ್ಡಾಯವಾದ ಡಿಜಿಟಲ್ ಪ್ರಮಾಣಪತ್ರ ಪಡೆಯುವುದು ಹೇಗೆ?
ಇಂತಹ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ/ಸರ್ಕಾರಿ ಉದ್ಯೋಗ ನೋಟಿಫಿಕೇಶನ್‌ಗಳನ್ನು ತಕ್ಷಣವೇ ಪಡೆಯಲು!WhatsApp & Telegram ಗ್ರೂಪ್‌ಗಳಿಗೆ ಸೇರಿ. Click to Join Below Button 👇